ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕಿನಿಂದ ಸಿಎಂ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 5 ಕೋ.ರೂ. ದೇಣಿಗೆ
ಬೆಂಗಳೂರು, ಸೆ.21: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಮತ್ತು ಡಿಸಿಸಿ ಬ್ಯಾಂಕ್ ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 5 ಕೋಟಿ ರೂ. ದೇಣಿಗೆ ನೀಡಲಾಯಿತು.
ದೇಣಿಗೆಯ ಚೆಕ್ ಅನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್ರಾಜಣ್ಣ ಶನಿವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಸಹಕಾರ ಕ್ಷೇತ್ರದ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.
Next Story