ವಾಹನ ಕಳವು ಮಾಡುತ್ತಿದ್ದ ಇಬ್ಬರ ಬಂಧನ
40 ಲಕ್ಷ ಮೌಲ್ಯದ ಮಾಲು ಜಪ್ತಿ
ಬೆಂಗಳೂರು, ಅ.11: ವಾಹನ ಕಳವು ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಬ್ಯಾಟರಾಯನಪುರ ಠಾಣಾ ಪೊಲೀಸರು 40 ಲಕ್ಷ ಮೌಲ್ಯದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಕೆಂಗೇರಿಯ ಚೆಟ್ಟುಪಾಳ್ಯದ ತೌಸಿಫ್ ಪಾಷ(28), ನರೇಂದ್ರ ಕುಮಾರ್(30) ಬಂಧಿತ ಆರೋಪಿಗಳಾಗಿದ್ದು, ಇವರಿಂದ 4 ಜನರೇಟರ್ ವಾಹನಗಳು, 1 ಕಾರು ಸೇರಿ 40 ಲಕ್ಷ ಮೌಲ್ಯದ 5 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story