ಕ್ಷುಲಕ ಕಾರಣಕ್ಕಾಗಿ ಜಗಳ: ಯುವಕನಿಗೆ ಚೂರಿ ಇರಿತ
ಬೆಂಗಳೂರು, ಅ.16: ಕ್ಷುಲಕ ಕಾರಣಕ್ಕಾಗಿ ನಡೆದ ಜಗಳದಲ್ಲಿ ನಾಲ್ವರು ವ್ಯಕ್ತಿಗಳು ಯುವಕನಿಗೆ ಚಾಕು ಇರಿದು ಪರಾರಿಯಾಗಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಶಿವು(21) ಚಾಕು ಇರಿತಕ್ಕೆ ಒಳಗಾದ ಯುವಕನಾಗಿದ್ದಾನೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕ್ಷುಲಕ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ನಾಲ್ವರು ಈತನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಈ ಬಗ್ಗೆ ಸಂಪಿಗೆಹಳ್ಳಿ ಠಾಣೆ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Next Story