ನಿಯಂತ್ರಣ ತಪ್ಪಿ ಬಿದ್ದ ಬೈಕ್: ಸವಾರ ಮೃತ್ಯು
ಬೆಂಗಳೂರು, ಅ.20: ವೇಗವಾಗಿ ಹೋಗುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ವೈಟ್ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಹೊರವಲಯದ ವರ್ತೂರು ನಿವಾಸಿ ರಾಮಾಂಜಿನಾಯಕ್(30) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ.
ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಮಾಂಜಿ, ಅ.16ರ ರಾತ್ರಿಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ಹೋಗುತ್ತಿದ್ದರು. ಮಾರ್ಗ ಮಧ್ಯೆ ಬಾಲಗೆರೆ ಮುಖ್ಯ ರಸ್ತೆಯಲ್ಲಿ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ವೈಟ್ಫೀಲ್ಡ್ ಸಂಚಾರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story