ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರೌಡಿ ಶೀಟರ್ ಹತ್ಯೆ
ಬೆಂಗಳೂರು, ಅ.25: ಹಳೇ ದ್ವೇಷದ ಹಿನ್ನೆಲೆ ರೌಡಿಯೋರ್ವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಕೊಲೆಗೈದಿರುವ ಘಟನೆ ಇಲ್ಲಿನ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿ ಪಟ್ಟಿಯಲ್ಲಿದ್ದ ಮಂಜುನಾಥ್(28) ಮೃತ ವ್ಯಕ್ತಿಯಾಗಿದ್ದಾನೆ ಎಂದು ಪೊಲೀಸರು ಗುರುತಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ 1:30 ಸುಮಾರಿಗೆ ಇಲ್ಲಿನ ಫಿನಿಕ್ಸ್ ಕಟ್ಟದ ಮುಂಭಾಗ ದುಷ್ಕರ್ಮಿಗಳ ತಂಡ, ಮಂಜುನಾಥ್ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಗಂಭೀರ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಸ್ಥಳಕ್ಕೆ ಧಾವಿಸಿದ ಪೊಲೀಸರ ತಂಡ, ಪರಿಶೀಲನೆ ನಡೆಸಿದ್ದು, ಮೂವರು ದುಷ್ಕರ್ಮಿಗಳು ಈ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Next Story