ಉಪಮುಖ್ಯಮಂತ್ರಿ ಗೋವಿಂದ ಕಾರಜೋಳಗೆ ಮಾತೃ ವಿಯೋಗ
ಬೆಂಗಳೂರು : ರಾಜ್ಯ ಸರಕಾರದ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಗೋವಿಂದ ಎಂ. ಕಾರಜೋಳರ ತಾಯಿ ಪಾರ್ವತಿ ಮಕ್ತಪ್ಪ ಕಾರಜೋಳ (90) ಅವರು ಇಂದು ಬೆಳಗ್ಗೆ ನಿಧನರಾದರು.
ಗೋವಿಂದ ಎಂ ಕಾರಜೋಳ ಸೇರಿದಂತೆ ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಮೊಮ್ಮಕ್ಕಳು ಹಾಗೂ ಮರಿ ಮೊಮ್ಮಕ್ಕಳು, ಅಪಾರ ಬಂಧು ಬಳಗವನ್ನ ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ ವಿಜಯಪುರ ಜಿಲ್ಲೆ ಹಾಗೂ ತಾಲೂಕಿನ ಸ್ವಗ್ರಾಮವಾದ ಕಾರಜೋಳದಲ್ಲಿ ಮಧ್ಯಾಹ್ನ 12 ಘಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸಂತಾಪ
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ತಾಯಿ ಪಾರ್ವತಿ ಮುಕ್ತಪ್ಪ ಕಾರಜೋಳ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬ ವರ್ಗದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Next Story