ಕೌಶಲ್ಯಾಭಿವೃದ್ಧಿಗೆ ಸರಕಾರದ ಆದ್ಯತೆ: ಎಚ್.ನಾಗೇಶ್ | Vartha Bharati- ವಾರ್ತಾ ಭಾರತಿ

ಕೌಶಲ್ಯಾಭಿವೃದ್ಧಿಗೆ ಸರಕಾರದ ಆದ್ಯತೆ: ಎಚ್.ನಾಗೇಶ್

ಬೆಂಗಳೂರು, ನ.19: ತಂತ್ರಜ್ಞಾನದ ಕಾಲದಲ್ಲಿ ಕೌಶಲ್ಯಾಧಾರಿತ ಶಿಕ್ಷಣವನ್ನು ಪ್ರೋತಾಹಿಸಬೇಕಾದ ಅಗತ್ಯವಿದೆ. ಆ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ದಕ್ಕಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಬಕಾರಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಎಚ್.ನಾಗೇಶ್ ಹೇಳಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್ ಸಮ್ಮಿಟ್-2019 ರ ಎರಡನೆ ದಿನ ಆಯೋಜಿಸಿದ್ದ ಕೌಶಲ್ಯ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಂದಿನ ಆಧುನಿಕ ಕಾಲಘಟ್ಟದಲ್ಲಿ ತಂತ್ರಜ್ಞಾನ ತ್ವರಿತ ಗತಿಯಲ್ಲಿ ಅಭಿವೃದ್ಧಿಯಾಗುತ್ತಿದೆ. ಇದಕ್ಕೆ ಅನುಗುಣವಾಗಿ ಕೌಶಾಲಾಭಿವೃದ್ಧಿ ಅಗತ್ಯವಿದೆ. ರಾಜ್ಯದಲ್ಲಿ ಸರಕಾರ ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಲಾಗುವುದು ಎಂದು ಅವರು ತಿಳಿಸಿದರು.

ಕೌಶಲ್ಯಾಭಿವೃದ್ಧಿಗಾಗಿ ಕರ್ನಾಟಕ ದೇಶದಲ್ಲಿಯೇ ಪ್ರತ್ಯೇಕ ಇಲಾಖೆಯನ್ನು ರೂಪಿಸಿದೆ. ಅಲ್ಲದೆ, ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯ ಮೂಲಕ ಪ್ರತಿ ವರ್ಷ 2.5 ಲಕ್ಷ ಯುವಜನರಿಗೆ ಕೌಶಲ್ಯ ತರಬೇತಿ ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ಸಚಿವ ನಾಗೇಶ್ ಹೇಳಿದರು.

ಕರ್ನಾಟಕ ಕೌಶಲ್ಯಾಭಿವೃದ್ಧಿಗೆ ಪ್ರತ್ಯೇಕ ಕ್ಷೇತ್ರವಾರು ಕಚೇರಿ ಮತ್ತು ವೆಬ್ ಅನ್ನು ಆರಂಭಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ. ಈ ವೆಬ್ ಪೋರ್ಟಲ್ ಮೂಲಕ ಕೌಶಲ್ಯ ತರಬೇತಿ ಆಕಾಂಕ್ಷಿಗಳು, ಉದ್ಯೋಗಾಕಾಂಕ್ಷಿಗಳು ಮತ್ತು ತರಬೇತಿ ನೀಡುವವರ ನಡುವೆ ಸಂಪರ್ಕ ಕಲ್ಪಿಸಲಾಗುತ್ತಿದೆ. ಈ ವೆಬ್‌ಗೆ ಕೌಶಾಲ್‌ಕರ್ ಎಂಬ ಹೆಸರಿನ್ನಿಟ್ಟು ಲೋಕಾರ್ಪಣೆ ಮಾಡಲಾಗಿದೆ ಎಂದರು.

ಕೌಶಾಲ್ಯಾಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಖಾಸಗಿ ಸಹಭಾಗಿತ್ವದಲ್ಲಿ 76 ಐಟಿಐಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಇಲ್ಲಿ ಅತ್ಯಾಧುನಿಕ ಯಂತ್ರೋಪಕರಣಗಳು ಹಾಗೂ ಈಗಿನ ತಂತ್ರಜ್ಞಾನಕ್ಕೆ ಅನುಗುಣವಾದ ಕೋರ್ಸ್‌ಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

ಸರಕಾರಿ ಉಪಕರಣ ಹಾಗೂ ತರಬೇತಿ ಕೇಂದ್ರದಲ್ಲಿ ಇಡೀ ದೇಶದಲ್ಲಿಯೇ ಮಾದರಿಯಾಗುವಂತಹ ರೀತಿಯಲ್ಲಿ ಕೌಶಲ್ಯ ತರಬೇತಿ ಕೇಂದ್ರಗಳನ್ನು ಆರಂಭ ಮಾಡಲಾಗಿದೆ. ಅಲ್ಲದೆ, ಕರ್ನಾಟಕ ಜರ್ಮನ್ ತಾಂತ್ರಿಕ ಅಭಿವೃದ್ಧಿ ಸಂಸ್ಥೆಯನ್ನು ಆರಂಭಿಸಿದೆ. ದೇಶದಲ್ಲಿಯೇ ಸರಕಾರಿ ಉಪಕರಣ ಹಾಗೂ ತರಬೇತಿ ಕೇಂದ್ರವನ್ನು ಹೊಂದಿದ ರಾಜ್ಯ ಕರ್ನಾಟಕವಾಗಿದೆ ಎಂದು ಹೇಳಿದರು.

ರಾಜ್ಯದಾದ್ಯಂತ ಸ್ವ ಸಹಾಯ ಗುಂಪುಗಳನ್ನು ಸ್ಥಾಪಿಸಿ, ಈ ಗುಂಪುಗಳಿಗೆ 250 ಕೋಟಿ ರೂ.ಗಳ ನಿಧಿಯನ್ನು ನೀಡಿ ಈ ಮೂಲಕ ಮಹಿಳೆಯರ ಕೌಶಲಾಭಿವೃದ್ಧಿಗೂ ಗಮನ ಹರಿಸಿ ಈ ಗುಂಪುಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡಲು ರಾಜ್ಯ ಸರಕಾರ ಅವಕಾಶ ಕಲ್ಪಿಸಿದೆ ಎಂದು ಅವರು ತಿಳಿಸಿದರು.

ಯುರೋಪ್, ಗಲ್ಫ್, ಸೌತ್ ಈಸ್ಟ್ ಏಷಿಯಾ, ಜಪಾನ್ ಮತ್ತು ಆಸ್ಟ್ರೇಲಿಯಾ ದೇಶಗಳಲ್ಲಿ ಕೌಶಲ್ಯ ಹೊಂದಿದ ಕಾರ್ಮಿಕರಿಗೆ ತುಂಬಾ ಬೇಡಿಕೆಯಿದೆ. ಅಲ್ಲಿನ ಬೇಡಿಕೆಗಳಿಗೆ ಅನುಗುಣವಾಗಿ ಕೌಶಲ್ಯ ತರಬೇತಿಯನ್ನು ನೀಡಿ ಯುವಕರಿಗೆ ವಿದೇಶದಲ್ಲಿಯೂ ಉದ್ಯೋಗ ಕಲ್ಪಿಸುವ ಕೆಲಸವೂ ನಡೆದಿದೆ ಎಂದು ಅವರು ವಿವರಿಸಿದರು.

ಬಹುಮಾನ ಪ್ರಕಟ
ಜಾಗತಿಕ ಕೌಶಲ್ಯ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಪಡೆದ ಪ್ರಣವ್‌ಗೆ ಮೂರು ಲಕ್ಷ ರೂ.ಗಳ ನಗದು ಬಹುಮಾನ ಹಾಗೂ ಇದೇ ಚಾಂಪಿಯನ್ ಪದಕ ಪಡೆದ ಸುಮಂತ್ ಮತ್ತು ಮಂಜುನಾಥ್‌ಗೆ ತಲಾ ಒಂದು ಲಕ್ಷ ರೂ. ನಗದು ಬಹುಮಾನವನ್ನು ಪ್ರಕಟಿಸಲಾಯಿತು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top