ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು
ಬೆಂಗಳೂರು, ನ.20: ಫೇಸ್ಬುಕ್ನಲ್ಲಿ ದೇವು ಬಿನ್ ಮುದ್ದೇಗೌಡ ಎಂಬ ಪೇಜ್ ಮೂಲಕ ಜೆಡಿಎಸ್ ಪಕ್ಷದ ಮುಖಂಡರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿ ಜೆಡಿಎಸ್ ವಿರುದ್ಧ ಉಪ ಚುನಾವಣೆಯಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಮುಖ್ಯ ಚುನಾವಣಾಧಿಕಾರಿಗೆ ಜೆಡಿಎಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದೂರು ಸಲ್ಲಿಸಿದ್ದಾರೆ.
ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಇತರ ಜೆಡಿಎಸ್ ಮುಖಂಡರನ್ನು ಅವಹೇಳನಕಾರಿಯಾಗಿ ಪೋಸ್ಟ್ ಮಾಡುವ ಮುಖಾಂತರ ಉಪ ಚುನಾವಣೆಯಲ್ಲಿ ಫೇಸ್ಬುಕ್ನಲ್ಲಿ ಜೆಡಿಎಸ್ ವಿರುದ್ಧ ಪ್ರಚಾರ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದು ಚುನಾವಣಾ ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಇದಕ್ಕೆ ಕಾರಣರಾದ ಫೇಸ್ಬುಕ್ ಪೇಜ್ ದೇವು ಬಿನ್ ಮುದ್ದೇಗೌಡ ವಿರುದ್ಧ ಸೂಕ್ತ ಕ್ರಮ ಜರುಗಿಸಿ, ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಪ್ರದೀಪ್ ಕುಮಾರ್ ಮನವಿ ಮಾಡಿದ್ದಾರೆ.
Next Story