ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರು, ಡಿ.12: ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿ 89 ಸಾವಿರ ರೂ.ನಗದು ಜಪ್ತಿ ಮಾಡಿದ್ದಾರೆ.
ರಾಜಾಜಿನಗರದ 3ನೇ ಕ್ರಾಸ್ನ ಮಹಂತೇಶ ಮತ್ತಿಕೊಪ್ಪ(33) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಮಹಂತೇಶ, ಇಲ್ಲಿನ ಬನಶಂಕರಿಯ ಮುಖ್ಯರಸ್ತೆಯ 3ನೇ ಮಹಡಿಯ ಮನೆಯೊಂದರಲ್ಲಿ ಮಸಾಜ್ ಪಾರ್ಲರ್ನಲ್ಲಿ ಕೆಲಸ ಮಾಡುತ್ತಿದ್ದು, ಉದ್ಯೋಗದ ನೆಪದಲ್ಲಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ. ಗಿರಾಕಿಗಳನ್ನು ಮೊಬೈಲ್ ಹಾಗೂ ಆನ್ಲೈನ್ ಮೂಲಕ ಸಂಪರ್ಕಿಸುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಪಾರ್ಲರ್ ಮೇಲೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Next Story