ಡಿ.13ರಂದು ನೂತನ ಶಾಸಕರ ಪ್ರಮಾಣ ವಚನ
ನೂತನ ಬಿಜೆಪಿ ಶಾಸಕರು
ಬೆಂಗಳೂರು, ಡಿ. 12: ರಾಜ್ಯದ ಹದಿನೈದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಯ್ಕೆಯಾದ ನೂತನ ಶಾಸಕರು ನಾಳೆ(ಡಿ.13) ಬೆಳಗ್ಗೆ 11:45ಕ್ಕೆ ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹದಿನೈದು ಮಂದಿ ನೂತನ ಶಾಸಕರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧನೆ ಮಾಡಲಿದ್ದಾರೆ ಎಂದು ಸ್ಪೀಕರ್ ಕಚೇರಿ ಮೂಲಗಳು ತಿಳಿಸಿವೆ.
Next Story