ಕೆಪಿಎಲ್ ಬೆಟ್ಟಿಂಗ್ ಪ್ರಕರಣ: ಅಂತರ್ರಾಷ್ಟ್ರೀಯ ಬುಕ್ಕಿ ವಶಕ್ಕೆ
ಬೆಂಗಳೂರು, ಜ.6: ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್)ನ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು, ಅಂತರ್ರಾಷ್ಟ್ರೀಯ ಬುಕ್ಕಿ ಜತಿನ್ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.
ನೆದರ್ಲ್ಯಾಂಡ್ನಲ್ಲಿ ತಲೆಮರೆಸಿಕೊಂಡಿದ್ದ ಹೊಸದಿಲ್ಲಿ ನಿವಾಸಿ ಜತಿನ್(32) ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು. ಅಷ್ಟರಲ್ಲೇ ಜತಿನ್, ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದ. ಜಾಮೀನಿನ ಮೇಲಿದ್ದ ಜತಿನ್, ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಖಚಿತ ಮಾಹಿತಿ ಆಧರಿಸಿದ ಸಿಸಿಬಿ ಪೊಲೀಸರು, ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Next Story