ಗ್ಯಾಸ್ ರೀಫಿಲ್ಲಿಂಗ್ ವೇಳೆ ಸ್ಫೋಟ
ಬೆಂಗಳೂರು, ಜ.7: ಕಾನೂನು ಬಾಹಿರ ಸಾರ್ವಜನಿಕ ಪ್ರದೇಶಗಳಲ್ಲಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಸ್ಥಳದಲ್ಲಿ ಸ್ಫೋಟಗೊಂಡ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದೊಡ್ಡತೋಗೂರು ಬಳಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದಾಗ ಸಿಲಿಂಡರ್ಗಳು ಸ್ಫೋಟಗೊಂಡಿವೆ. ಪರಿಣಾಮವಾಗಿ ಹಲವು ಮನೆಗಳ ಮೇಲ್ಛಾವಣಿ ಜಖಂಗೊಂಡಿವೆ ಎಂದು ತಿಳಿದುಬಂದಿದೆ.
ವಸತಿ ಪ್ರದೇಶ ಬಳಿ ಈ ಅನಾಹುತ ಸಂಭವಿಸಿದ್ದು ಅದೃಷ್ಟವಶಾತ್ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಈ ಸ್ಥಳದಲ್ಲಿ ಯಾವುದೇ ಮುಂಜಾಗ್ರತಾ ಕ್ರಮ ವಹಿಸದೆ ಈ ಘಟನೆ ನಡೆದಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story