ಕ್ರಿಕೆಟ್ ಬೆಟ್ಟಿಂಗ್ ಆರೋಪ: ನಾಲ್ವರ ಬಂಧನ
ಬೆಂಗಳೂರು, ಜ.11: ಹಣ ಪಣವಾಗಿ ಕಟ್ಟಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ನಿವಾಸಿಗಳಾದ ಗಿರೀಶ್, ದಿಲೀಪ್, ಶಿವರಾಜ್, ಶ್ಯಾಮ್ ಸುಂದರ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.ಇವರಿಂದ 1.5 ಲಕ್ಷ ರೂ.ನಗದು, ಮೊಬೈಲ್ ಜಪ್ತಿ ಮಾಡಿ, ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
Next Story