ಬೆಂಗಳೂರು ವಿವಿ ಸ್ನಾತಕೋತ್ತರ ಪರೀಕ್ಷೆಗಳು ರದ್ದು
ಬೆಂಗಳೂರು, ಜ.11: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷೆಗಳು ಜ.13ರಿಂದ 21ರವರೆಗೆ ನಡೆಯುವುದರಿಂದ ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲ ಸ್ನಾತಕೋತ್ತರ ವಿಭಾಗಗಳ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.
ಜ.13ರಂದು ಅರಂಭವಾಗಬೇಕಿದ್ದ ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು, ಮುಂದಿನ ಪರೀಕ್ಷಾ ವೇಳಾಪಟ್ಟಿಯನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story