ಅಕ್ರಮ ಜಾಹೀರಾತು ತೆರವಿಗೆ ಜಿಲ್ಲೆ, ತಾಲೂಕು ಮಟ್ಟದಲ್ಲಿ ನಿರ್ದೇಶನ ನೀಡಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ
ಬೆಂಗಳೂರು, ಜ.16: ಅಕ್ರಮ ಜಾಹೀರಾತುಗಳನ್ನು ತೆರವುಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಲು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ನಿರ್ದೇಶನ ನೀಡಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ.
ಅಕ್ರಮ ಜಾಹೀರಾತು ತೆರವು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993ರ ಸೆಕ್ಷನ್ 316(3)ರ ಅಡಿಯಲ್ಲಿ ಅಧಿಕಾರವನ್ನು ಚಲಾಯಿಸಬಹುದು. 2013ರಲ್ಲಿ ರೂಪಿಸಲಾದ ಕಾಯಿದೆ ಅಡಿಯಲ್ಲಿ ಅಕ್ರಮ ಜಾಹೀರಾತು ವಿರುದ್ಧ ಕ್ರಮ ಕೈಗೊಳ್ಳಲು ಗ್ರಾಪಂ, ತಾಪಂ, ಜಿಪಂಗೆ ನಿರ್ದೇಶಿಸಬೇಕೆಂದು ನ್ಯಾಯಪೀಠವು ರಾಜ್ಯ ಸರಕಾರಕ್ಕೆ ಆದೇಶಿಸಿ, ವಿಚಾರಣೆಯನ್ನು ಮುಂದೂಡಿದೆ.
Next Story