ಅಪರಿಚಿತ ವಾಹನ ಢಿಕ್ಕಿ: ಬೈಕ್ ಸವಾರ ಸಾವು
ಬೆಂಗಳೂರು, ಜ.20: ಚಿಕ್ಕಜಾಲದ ಟೆಲಿಕಾಮ್ ಲೇಔಟ್ ಬಳಿ ರವಿವಾರ ರಾತ್ರಿ ಹಿಂದಿನಿಂದ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದು ಬೈಕ್ನಲ್ಲಿ ಹೋಗುತ್ತಿದ್ದ ಬಿಎಂಟಿಸಿ ನಿವೃತ್ತ ಚಾಲಕ ನಾಗಪ್ಪ(63) ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ರವಿವಾರ ರಾತ್ರಿ 7 ಗಂಟೆ ಸುಮಾರಿಗೆ ಬೈಕ್ನಲ್ಲಿ ಹೆಲ್ಮೆಟ್ ಧರಿಸದೆ ಹೋಗುತ್ತಿದ್ದಾಗ ಅಪರಿಚಿತ ವಾಹನ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿರುವ ಚಿಕ್ಕಜಾಲ ಸಂಚಾರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story