ಮಾದಕ ವಸ್ತು ಮಾರಾಟ ಆರೋಪ: ನೈಝೀರಿಯಾ ಪ್ರಜೆ ಬಂಧನ
ಬೆಂಗಳೂರು, ಜ.24: ಮಾದಕ ವಸ್ತು ಮಾರಾಟ ಆರೋಪದಡಿ ನೈಝೀರಿಯಾ ದೇಶದ ಪ್ರಜೆಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇ.ಸಿ.ಮೈಕ್(34) ಬಂಧಿತ ಆರೋಪಿಯಾಗಿದ್ದು, ಈತ ಯಲಹಂಕ ವ್ಯಾಪ್ತಿಯ ಅಯ್ಯಪ್ಪ ಬ್ಲಾಕ್ನಲ್ಲಿ ನೆಲೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಾಸವಿದ್ದ ಮನೆಯಲ್ಲಿಯೇ ಕೊಕೈನ್ ಸೇರಿದಂತೆ ಇನ್ನಿತರೆ ಮಾದಕ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದ ಆರೋಪಿ, ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿ, ಇಲ್ಲಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಿದ್ದಾರೆ.
Next Story