ಉದ್ಯೋಗ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ: ಆರೋಪಿ ಸೆರೆ
ಬೆಂಗಳೂರು, ಜ.27: ಉದ್ಯೋಗ ಕೊಡಿಸುವ ನೆಪದಲ್ಲಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ಈಜೀಪುರ ನಿವಾಸಿ ಸೂರ್ಯ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಇದೇ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಅಬ್ದುಲ್ ಮುಕೀಬ್, ಗುರುರಾಜ್ ಹಾಗೂ ಪ್ರಜ್ವಲ್ ಎಂಬುವರಿಗಾಗಿ ಶೋಧ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನಿಂದ 10,500 ರೂ. ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇಲ್ಲಿನ ವಿವೇಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.
Next Story