ಅಕ್ರಮ ಸಕ್ರಮ ಯೋಜನೆ: ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ- ಸಿಎಂ ಎಚ್ಚರಿಕೆ | Vartha Bharati- ವಾರ್ತಾ ಭಾರತಿ

ಅಕ್ರಮ ಸಕ್ರಮ ಯೋಜನೆ: ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ- ಸಿಎಂ ಎಚ್ಚರಿಕೆ

ಬೆಂಗಳೂರು, ಜ.28: ಅಕ್ರಮ ಸಕ್ರಮ ಯೋಜನೆಯಡಿ ಹಕ್ಕು ಪತ್ರ ವಿತರಿಸಲು ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ಕಂದಾಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಅಕ್ರಮ ಸಕ್ರಮ ಯೋಜನೆಯಡಿ 10 ಸಾವಿರ ಫಲಾನುಭವಿಗಳಿಗೆ ಮನೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡುತ್ತಿದ್ದರು. ಅಕ್ರಮ ಸಕ್ರಮ ಮಾಡಲು ಸರ್ಕಾರವೇ ನಿಮ್ಮ ಮನೆ ಬಾಗಿಲಿಗೆ ಬರುತ್ತಿದೆ. ಲಂಚ ಕೇಳುವ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದಲ್ಲಿ ತಕ್ಷಣ ಅಂತಹ ಅಧಿಕಾರಿಗಳನ್ನು ಅಮಾನತು ಮಾಡಿ ಕ್ರಮ ಜರುಗಿಸಲಾಗುವುದು ಎಂದರು.

ಜನರ ಶ್ರೇಯೋಭಿವೃದ್ಧಿಗಾಗಿ ಕಂದಾಯ ಇಲಾಖೆಯು ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅದರಲ್ಲಿ 94 (ಸಿ) ಮತ್ತು 94 (ಸಿಸಿ) ಯಡಿ ಅಕ್ರಮ ಸಕ್ರಮ ಯೋಜನೆ ಬಡಜನರಿಗೆ ಅತ್ಯಂತ ಉಪಯುಕ್ತವಾಗಿದೆ. ಸರ್ಕಾರಿ ಜಮೀನುಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವ್ಯಕ್ತಿಗಳು ವಾಸದ ಮನೆಗಳನ್ನು ನಿರ್ಮಿಸಿಕೊಂಡಿದ್ದಲ್ಲಿ ಅಂತಹ ವಾಸದ ಮನೆಗಳನ್ನು ಸಕ್ರಮ ಮಾಡಲು ಕರ್ನಾಟಕ ಭೂ-ಕಂದಾಯ ಕಾಯ್ದೆ 1964 ರ ಕಲಂ 94 (ಸಿ) ಮತ್ತು 94 (ಸಿಸಿ) ಅವಕಾಶವನ್ನು ಸರ್ಕಾರ ಕಲ್ಪಿಸಿಕೊಟ್ಟಿದೆ ಎಂದರು.

ಈ ಅವಕಾಶದಂತೆ ಕಲಂ 94(ಸಿ) ರಡಿ ಗ್ರಾಮೀಣ ಪ್ರದೇಶದಲ್ಲಿ (ಬಿಬಿಎಂಪಿ ವ್ಯಾಪ್ತಿಯ ಹೊರಗಡೆ) ಗರಿಷ್ಠ 4,000 ಚದರ ಅಡಿಗಳಷ್ಟು ಅನಧಿಕೃತ ವಾಸದ ಮನೆಗಳನ್ನು ಸಕ್ರಮ ಮಾಡಬಹುದಾಗಿದೆ ಹಾಗೂ ನಗರ ಪ್ರದೇಶ (ಬಿಬಿಎಂಪಿ) ವ್ಯಾಪ್ತಿ ಒಳಗಡೆ 600 ಚದರ ಅಡಿ ಮತ್ತು ಬಿಬಿಎಂಪಿ ಸರಹದ್ದಿನ 18 ಕಿ.ಮೀ ಒಳಗಡೆ 1,200 ಚದರ ಅಡಿವರೆಗಿನ ಅನಧಿಕೃತ ವಾಸದ ಮನೆಗಳನ್ನು ಸಕ್ರಮ ಮಾಡಬಹುದಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 9,000 ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1,000 ಸೇರಿದಂತೆ ಒಟ್ಟು 10,000 ಹಿಂದುಳಿದ ವರ್ಗದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿರುವುದು ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇನ್ನು ಆರು ತಿಂಗಳಲ್ಲಿ ಬೆಂಗಳೂರಿನ ಚಿತ್ರಣ ಬದಲಾಯಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕಂದಾಯ ಇಲಾಖೆಯ ಭೂಮಿ ಒತ್ತುವರಿದಾರರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುತ್ತದೆ. ಇದಕ್ಕಾಗಿ, ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಸಂಸದ ಪಿ.ಸಿ.ಮೋಹನ್, ಶಾಸಕರಾದ ಉದಯ ಗರುಡಾಚಾರ್, ಎಸ್.ಆರ್.ವಿಶ್ವನಾಥ್ ಉಪಸ್ಥಿತರಿದ್ದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top