ಜೂಜಾಟ ಆಡುತ್ತಿದ್ದ ಆರೋಪ: ಏಳು ಮಂದಿ ಬಂಧನ
ಬೆಂಗಳೂರು, ಫೆ.3: ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ಆಡುತ್ತಿದ್ದ ಆರೋಪದಡಿ ಏಳು ಜನರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 56 ಸಾವಿರ ರೂ. ನಗದು, ಮೊಬೈಲ್ ಜಪ್ತಿ ಮಾಡಿದ್ದಾರೆ.
ಇಲ್ಲಿನ ಜೀವನ್ ಭೀಮಾನಗರ ಮುಖ್ಯ ರಸ್ತೆಯ ಕೋಡಿಹಳ್ಳಿ ಗೋಲ್ಡನ್ಡೆಪ್ಲನ್ಸ್ ಅಪಾರ್ಟ್ಮೆಂಟ್ ಕೊಠಡಿಯೊಂದರಲ್ಲಿ ಜೂಜಾಟ ನಡೆಸುತ್ತಿದ್ದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ.
Next Story