ವೇಶ್ಯಾವಾಟಿಕೆ ದಂಧೆ: ಯುವತಿ ಸೆರೆ
ಬೆಂಗಳೂರು, ಫೆ.3: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಡಿ ಯುವತಿಯೊಬ್ಬಾಕೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸ್ವಪ್ನಾ ಎಂಬಾಕೆ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಪಾ ಹೆಸರಿನಲ್ಲಿ ಮಸಾಜ್ ಸೆಂಟರ್ ಆರಂಭಿಸಿ, ಮಹಿಳೆಯರನ್ನಿಟ್ಟು ಆರೋಪಿ ಸ್ವಪ್ನಾ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ಆರೋಪಿಯನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಆರೋಪಿ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story