ಪ್ರಶ್ನೆ ಪತ್ರಿಕೆ ಬಗ್ಗೆ ವದಂತಿ ಹರಡಿಸುವವರ ವಿರುದ್ಧ ಕಠಿಣ ಕ್ರಮ: ಸಚಿವ ಸುರೇಶ್‌ ಕುಮಾರ್ | Vartha Bharati- ವಾರ್ತಾ ಭಾರತಿ

ಪ್ರಶ್ನೆ ಪತ್ರಿಕೆ ಬಗ್ಗೆ ವದಂತಿ ಹರಡಿಸುವವರ ವಿರುದ್ಧ ಕಠಿಣ ಕ್ರಮ: ಸಚಿವ ಸುರೇಶ್‌ ಕುಮಾರ್

ಬೆಂಗಳೂರು, ಫೆ.14: ಮುಂದಿನ ತಿಂಗಳು ನಡೆಯಲಿರುವ ಪಿಯುಸಿ ಮತ್ತು ಎಸೆಸೆಲ್ಸಿ ಪರೀಕ್ಷೆಗಳಲ್ಲಿ ಯಾವುದೋ ಪ್ರಶ್ನೆ ಪತ್ರಿಕೆಯನ್ನು ಈ ವರ್ಷದ್ದೆಂದು ನಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಗೊಂದಲ ಮೂಡಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಎಚ್ಚರಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳ ಸಿದ್ಧತೆ ಕುರಿತು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಮತ್ತು ಉಪವಿಭಾಗಗಳ ಖಜಾನಾಧಿಕಾರಿಗಳು ಮತ್ತು ಪಿಯು ಉಪನಿರ್ದೇಶಕರೊಂದಿಗೆ ಅವರು ವಿಡಿಯೋ ಸಂವಾದ ನಡೆಸಿದರು.

ಪರೀಕ್ಷೆಗಳು ಸುಲಲಿತವಾಗಿ ಯಾವುದೇ ಗೊಂದಲವಿಲ್ಲದೆ ನಡೆಯುವ ಕುರಿತು ಸೂಚನೆಗಳನ್ನು ನೀಡಿದರು. ಸಾಮಾಜಿಕ ಜಾಲತಾಣಗಳ ಮೂಲಕ ಗೊಂದಲ ಮೂಡಿಸುವವರ ಕುರಿತು ಸೂಕ್ತ ಕ್ರಮಕೈಗೊಳ್ಳುವ ಕುರಿತಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ತಮ್ಮ ಹಂತದಲ್ಲಿ ಸುತ್ತೋಲೆ ಹೊರಡಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಪ್ರಶ್ನೆ ಪತ್ರಿಕೆ ರವಾನೆ, ಸಂರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳನ್ನು ವಿವರಿಸಿ, ಪ್ರಶ್ನೆ ಪತ್ರಿಕೆ ರವಾನೆ ವಾಹನಗಳನ್ನು ರಾಜ್ಯದ ಯಾವುದೇ ವಾಹನ ತಪಾಸಣಾ ಕೇಂದ್ರಗಳಲ್ಲಿ ಯಾವುದೇ ರೀತಿಯಲ್ಲೂ ತಪಾಸಣೆ ಮಾಡದಂತೆ ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಮನವಿ ಮಾಡಲಾಗಿದೆ. ಹಾಗೆಯೇ ಆಯಾ ಜಿಲ್ಲೆಗಳಲ್ಲೂ ಅದನ್ನು ಖಚಿತಪಡಿಸಲು ಸಂಬಂಧಿಸಿದವರಿಗೆ ಡಿಸಿ ಮತ್ತು ಎಸ್ಪಿಗಳು ಮಾರ್ಗದರ್ಶನ ನೀಡಬೇಕೆಂದು ಸುರೇಶ್ ಕುಮಾರ್ ಸೂಚಿಸಿದರು.

ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕು ಮತ್ತು ಜಿಲ್ಲಾ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲು ಸೂಚಿಸಲಾದ ನಿಗದಿತ ಮಾರ್ಗಗಳಲ್ಲಿಯೇ ರೂಟ್ ವಾಹನಗಳು ಸಾಗಬೇಕು ಹಾಗೆಯೇ ಪರೀಕ್ಷಾ ಸಾಮಗ್ರಿಗಳು ಪರೀಕ್ಷಾ ಸಮಯಕ್ಕೂ ಮೊದಲೆ ದೊರೆಯುವಂತೆ ಖಚಿತಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಜಿಲ್ಲಾಡಳಿತ ಮತ್ತು ಅಪರ ಜಿಲ್ಲಾಧಿಕಾರಿ ನೇತೃತ್ವದ ಪರೀಕ್ಷಾ ಪ್ರಶ್ನೆ ಪತ್ರಿಕೆ ಪಾಲನಾ ತಂಡದ ಜವಾಬ್ದಾರಿಯಾಗಿದ್ದು, ಅದನ್ನು ಯಾವುದೇ ವ್ಯತ್ಯಯಕ್ಕೆ ಅವಕಾಶವಿಲ್ಲದಂತೆ ಮಾಡಬೇಕಿದೆ ಎಂದು ಸುರೇಶ್ ಕುಮಾರ್ ವಿವರಿಸಿದರು.

ಪರೀಕ್ಷಾ ಕೇಂದ್ರದೊಳಗೆ ಮಾಧ್ಯಮ ಪ್ರತಿನಿಧಿಗಳೂ ಸೇರಿದಂತೆ ಯಾರಿಗೂ ಅವಕಾಶವಿಲ್ಲ. ಕೇವಲ ಗುರುತಿನ ಚೀಟಿಯೊಂದಿಗೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತವಾದ ಸಿಬ್ಬಂದಿ ಮಾತ್ರವೆ ಪರೀಕ್ಷಾ ಕೇಂದ್ರ ಮತ್ತು ಅದರ ಸುತ್ತಮುತ್ತ ಚಲನವಲನಕ್ಕೆ ಅವಕಾಶವಿರುತ್ತದೆ. ಹಾಗೆಯೇ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲ ಝೆರಾಕ್ಸ್ ಕೇಂದ್ರಗಳನ್ನು ಪರೀಕ್ಷೆಗಳು ಮುಗಿಯುವವರಗೆ ಮುಚ್ಚಿಸಲು ಪೊಲೀಸ್ ಇಲಾಖೆ ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಹೇಳಿದರು.

ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡುವುದು ಹಾಗೂ ಸ್ವಚ್ಛ ಶೈಕ್ಷಣಿಕ ಹಿನ್ನೆಲೆಯುಳ್ಳವರನ್ನು ಮಾತ್ರವೇ ನೇಮಿಸುವುದು ಸೇರಿದಂತೆ ನಿಯೋಜಿತ ಸಿಬ್ಬಂದಿಯ ಪೂರ್ವಾಪರಗಳನ್ನು ಪರಿಶೀಲಿಸಬೇಕು ಎಂದು ಅವರು ಹೇಳಿದರು. ಹಿಂದಿನ ಪರೀಕ್ಷೆಗಳಲ್ಲಿ ಗೊಂದಲ ಮೂಡಿಸಿದ ಖಜಾನೆಗಳು, ಪರೀಕ್ಷಾ ಕೇಂದ್ರಗಳು ಮತ್ತು ಅದಕ್ಕೆ ಕಾರಣರಾದ ಸಿಬ್ಬಂದಿ ಹಾಗೆಯೆ ಇಂತಹ ಯಾವುದೇ ರೀತಿಯ ಗೊಂದಲ ಮೂಡಿಸಬಹುದಾದ ವ್ಯಕ್ತಿಗಳ ಕುರಿತು ಹೆಚ್ಚಿನ ನಿಗಾವಹಿಸಬೇಕು ಎಂದು ಸುರೇಶ್ ಕುಮಾರ್ ತಿಳಿಸಿದರು.

ವಿಕಲಚೇತನರಿಗೆ ಪರೀಕ್ಷೆ ಬರೆಯಲು ಒದಗಿಸುವ ಸಹಾಯಕರನ್ನು ಒದಗಿಸುವ ಕುರಿತು ಸ್ಪಷ್ಪಮಾರ್ಗದರ್ಶಿ ಸೂತ್ರಗಳನ್ನು ನಿಗದಿಪಡಿಸಲಾಗಿದ್ದು, ಆ ಪ್ರಕಾರವೇ ಸಹಾಯಕರನ್ನು ಒದಗಿಸಬೇಕು. ಪರೀಕ್ಷಾರ್ಥಿ ಪರೀಕ್ಷೆಯ ಕೊನೆ ಬೆಲ್ ಬಾರಿಸುವ ಮೊದಲು ಯಾವುದೆ ಸಮಯದಲ್ಲಿ ಹೋಗುವುದಾದರೆ ಅವರಿಂದ ಪ್ರಶ್ನೆ ಪತ್ರಿಕೆಯನ್ನೂ ಪಡೆದುಕೊಂಡು ಅವರನ್ನು ಹೊರಗೆ ಕಳಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಪರೀಕ್ಷಾ ಕೊಠಡಿಯಲ್ಲಿ ಗೋಡೆ ಗಡಿಯಾರ, ಶುದ್ಧ ಕುಡಿಯವ ನೀರಿನ ವ್ಯವಸ್ಥೆ ಮಾಡಬೇಕಿರುವ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸುವುದು ಸೇರಿದಂತೆ ಸುಲಲಿತ ಪರೀಕ್ಷೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡಿದ ಅವರು, ಮಕ್ಕಳ ನೈತಿಕತೆ ಕುಂದಿಸುವ ಯಾವುದೇ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದನ್ನು ಜಿಲ್ಲಾಡಳಿತದ ಪರೀಕ್ಷಾ ತಂಡಗಳು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ವಿಡಿಯೋ ಸಂವಾದದಲ್ಲಿ ಪದವಿಪೂರ್ವ ಇಲಾಖೆ ನಿರ್ದೇಶಕಿ ಸಿ. ಕನಗವಲ್ಲಿ, ಖಜಾನೆ ಇಲಾಖೆ ಆಯುಕ್ತ ಉಜ್ವಲ್ ಕುಮಾರ್ ಘೋಷ್ ಸೇರಿದಂತೆ ಮತ್ತಿತರರ ಅಧಿಕಾರಿಗಳು ಭಾಗವಹಿಸಿದ್ದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top