ಹುಕ್ಕಾ ಬಾರ್ ನಡೆಸುತ್ತಿದ್ದ ಆರೋಪ: ಮೂವರ ಬಂಧನ, ನಗದು ಜಪ್ತಿ
ಬೆಂಗಳೂರು, ಫೆ.14: ಕಾನೂನು ಬಾಹಿರ ಹುಕ್ಕಾ ಬಾರ್ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 5 ಸಾವಿರ ರೂ.ನಗದು, 11 ಹುಕ್ಕಾ ಪೋಟ್ ಸೇರಿ ಇನ್ನಿತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಇಲ್ಲಿನ ಹೊಸೂರು ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ಹುಕ್ಕಾ ಬಾರ್ ನಡೆಸುತ್ತಿದ್ದ ನಿಝಾಮ್, ದಾವುದ್ ಹಾಗೂ ಸದ್ದಾಂ ಎಂಬುವರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ.
Next Story