ಬೆಂಗಳೂರು, ಫೆ.18: ವ್ಯಕ್ತಿಯೋರ್ವನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಂದಿನಿ ಲೇಔಟ್ ಚಾಮುಂಡೇಶ್ವರಿ ನಗರದ ಪ್ರಸನ್ನ (30) ಎಂಬಾತ ಕೊಲೆಯಾದ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದು, ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ.