ಅನಧಿಕೃತ ಕಟ್ಟಡಗಳ ತೆರವು ವಿಚಾರ: ಹತ್ತು ದಿನಗಳಲ್ಲಿ ಮಾಹಿತಿ ನೀಡಲು ಸರಕಾರಕ್ಕೆ ಹೈಕೋರ್ಟ್ ಆದೇಶ
ಬೆಂಗಳೂರು, ಫೆ.26: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳ ತೆರವು ಹಾಗೂ ಸಮೀಕ್ಷೆಗೆ ಸಂಬಂಧಿಸಿದಂತೆ 10 ದಿನದಲ್ಲಿ ಮಾಹಿತಿ ನೀಡಲು ರಾಜ್ಯ ಸರಕಾರ, ಬಿಬಿಎಂಪಿಗೆ ಹೈಕೋರ್ಟ್ ಆದೇಶಿಸಿದೆ.
ಈ ಕುರಿತು ಅನಧಿಕೃತ ಕಟ್ಟಡಗಳ ತೆರವು ಸಂಬಂಧ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಸುಪ್ರೀಂಕೋರ್ಟ್ ನಿರ್ದೇಶನದಂತೆ ನಿಯಮಾವಳಿಗಳನ್ನು ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡ, ಅಕ್ರಮ ಕಟ್ಟಡ, ನಕ್ಷೆ ಇಲ್ಲದ ಕಟ್ಟಡಗಳನ್ನು ನೆಲಸಮಗೊಳಿಸಿ, ಇದಕ್ಕಾಗಿ ಸರಕಾರ ಸಿಬ್ಬಂದಿ ಹಾಗೂ ಅಗತ್ಯ ಸಂಪನ್ಮೂಲ ಒದಗಿಸಲು ಈ ಹಿಂದೆ ನ್ಯಾಯಪೀಠವು ಸೂಚಿಸಿತ್ತು. ಇಂದು ಕಟ್ಟಡಗಳ ತೆರವು ಹಾಗೂ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿ ನೀಡಲು ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.
Next Story