ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಬೆಂಗಳೂರು, ಫೆ.28: ಯುವಕನೋರ್ವನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಫೆ.26ರಂದು ಕುಮಾರ್ ಮತ್ತು ಅಜಯ್ ಎಂಬವರು, ಯುವಕನೋರ್ವನನ್ನು ಗುರಿಯಾಗಿಸಿಕೊಂಡು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು ಘಟನೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಈ ಸಂಬಂಧ ದೂರು ದಾಖಲಿಸಿಕೊಂಡಿರುವ ನಂದಿನಿ ಲೇಔಟ್ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story