ಮಾ.7ಕ್ಕೆ ನಲಪಾಡ್ ವುಮೆನ್ ಅವಾರ್ಡ್ ಪ್ರದಾನ ಸಮಾರಂಭ
ಬೆಂಗಳೂರು, ಫೆ.28: ಎನ್.ಎ.ಹಾರೀಸ್ ಫೌಂಡೇಷನ್ ವತಿಯಿಂದ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾ.7 ರಂದು ಹೊಸೂರು ರಸ್ತೆಯಲ್ಲಿರುವ ಬಾಲ್ಡ್ವಿನ್ ಬಾಯ್ಸ್ ಶಾಲೆಯ ಸಭಾಂಗಣದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕಿಯರಿಗೆ ನಲಪಾಡ್ ವುಮೆನ್ ಅವಾರ್ಡ್ 2020 ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ನಗರದ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿವೃತ್ತ ಪ್ರಾಂಶುಪಾಲೆ ಸೌಭಾಗ್ಯ ಈಶ್ವರಯ್ಯ, ಮಾ.1 ರಂದು ಆಸ್ಟೀನ್ ಟೌನ್ನಲ್ಲಿರುವ ನಂದಾ ಫುಟ್ಬಾಲ್ ಮೈದಾನದಲ್ಲಿ ಬೆಂಗಳೂರು ಜಿಲ್ಲಾ ಮಟ್ಟದ ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ. ಇದರಲ್ಲಿ 5 ರೀತಿಯ ಕ್ರೀಡೆಗಳನ್ನು ಹಮ್ಮಿಕೊಂಡಿದ್ದು, ಇದರಲ್ಲಿ 30 ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರು ಭಾಗವಹಿಸಬಹುದು. ವಿಜೇತರಾದ ಮಹಿಳೆಯರಿಗೆ ನಗದು ಬಹುಮಾನವಿದೆ ಎಂದು ತಿಳಿಸಿದರು.
ಕ್ರೀಡೆಯಲ್ಲಿ ವಿಜೇತರಾದ ಮಹಿಳೆಯರು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 30 ಮಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸಾಲುಮರದ ತಿಮ್ಮಕ್ಕ, ಸುಮಂಗಲಿ ಸೇವಾಶ್ರಮದ ಸುಶೀಲಮ್ಮ, ಶಾಸಕಿ ಸೌಮ್ಯರೆಡ್ಡಿ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.