ವೇಶ್ಯಾವಾಟಿಕೆ ದಂಧೆ: ಇಬ್ಬರು ಸಿಸಿಬಿ ಪೊಲೀಸರ ಬಲೆಗೆ
ಬೆಂಗಳೂರು, ಮಾ.1: ಹಣದ ಆಸೆಗಾಗಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ನಿವಾಸಿಗಳಾದ ಪೀಟರ್ ಸುನವರ್(34), ರಾಜ್ಕುಮಾರ್(48) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಸ್ಪಾ ಮಾಲಕ ಕೆವಾಲ್ ತಿರುವ ಎಂಬಾತ ತಲೆಮರೆಸಿಕೊಂಡಿದ್ದು, ಈತನ ಪತ್ತೆಗಾಗಿ ಕಾರ್ಯ ಮುಂದುವರಿದಿದೆ. ಆರೋಪಿಗಳಿಂದ 2900 ರೂ. ಹಣ, 2 ಮೊಬೈಲ್, ಲ್ಯಾಪ್ಟಾಪ್ ಜಪ್ತಿ ಮಾಡಿ, ಇಲ್ಲಿನ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ಯಲ್ಲಿ ಮೊಕದ್ದಮೆ ದಾಖಲಾಗಿದೆ.
Next Story