ವಿಧಾನಸೌಧಕ್ಕೂ ತಟ್ಟಿದ ಕೊರೋನ ಬಿಸಿ: ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ
ಬೆಂಗಳೂರು, ಮಾ.18: ಕೊರೋನ ಆತಂಕ ವಿಧಾನಸೌಧಕ್ಕೂ ತಟ್ಟಿದ್ದು, ವಿಧಾನ ಪರಿಷತ್ತಿನ ಕಲಾಪ ವೀಕ್ಷಿಸಲು ಬರುವ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಬುಧವಾರ ಸದನದಲ್ಲಿ ಈ ಕುರಿತು ವಿಧಾನ ಪರಿಷತ್ತಿನ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಪ್ರಕಟಣೆ ಹೊರಡಿಸಿದ್ದು, ಕೊರೋನ ಹಿನ್ನೆಲೆಯಲ್ಲಿ ಮುಂದಿನ ಆದೇಶದ ವರೆಗೆ ಗ್ಯಾಲರಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಶಾಸಕರು ಹಾಗೂ ಸಚಿವರು ಸಹ ಗ್ಯಾಲರಿ ಪ್ರವೇಶ ಕೋರಿ ಮನವಿ ಸಲ್ಲಿಸಬಾರದು. ಪಾಸ್ ಸಹ ವಿತರಿಸಬಾರದು ಎಂದು ಅವರು ತಿಳಿಸಿದರು.
Next Story