ಬೆಂಗಳೂರು: ಗ್ರಾಮ ಪಂಚಾಯತ್ ಸದಸ್ಯನ ಕೊಲೆ ಪ್ರಕರಣ; ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ
ಸಾಂದರ್ಭಿಕ ಚಿತ್ರ
ಬೆಂಗಳೂರು, ಮೇ 21: ಗ್ರಾಮ ಪಂಚಾಯತ್ ಸದಸ್ಯನ ಕೊಲೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಮಾಚೋಹಳ್ಳಿಯ ನಿವಾಸಿ ಮೋಹನ್ ಕುಮಾರ್(28) ಬಂಧಿತ ಆರೋಪಿಯಾಗಿದ್ದು, ಈತ ಜೆಟಿವಿ ಮತ್ತು ಟಿವಿ6 ಸುದ್ದಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಮಾಚೋಹಳ್ಳಿ ಗ್ರಾಮ ಪಂಚಾಯತ್ ಸದಸ್ಯ ಲಕ್ಷ್ಮೀನಾರಾಯಣ ಕೊಲೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು. ಈ ಸಂಬಂಧ ತನಿಖೆ ನಡೆಸಿ, ತಲೆಮರೆಸಿಕೊಂಡಿದ್ದ ಮೋಹನ್ ಕುಮಾರ್ ನನ್ನು ಬಂಧಿಸಲಾಗಿದೆ. ಈತ ಪ್ರಕರಣದಲ್ಲಿ ಎರಡನೆ ಆರೋಪಿಯಾಗಿದ್ದು, ಈತನನ್ನು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ವಶಕ್ಕೆ ನೀಡಲಾಗಿದೆ ಎಂದು ಸಿಸಿಬಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
Next Story