ನಟ ಯಶ್ ಮನೆ ತಡೆಗೋಡೆಗೆ ಟ್ರ್ಯಾಕ್ಟರ್ ಢಿಕ್ಕಿ
ಬೆಂಗಳೂರು, ಮೇ 27: ಕನ್ನಡ ಸಿನಿಮಾ ನಟ ಯಶ್ ಅವರ ಹೊಸಕೆರೆಹಳ್ಳಿಯಲ್ಲಿನ ಮನೆಯ ಕಾಂಪೌಂಡ್ಗೆ ಮಂಗಳವಾರ ರಾತ್ರಿ ಟ್ರ್ಯಾಕ್ಟರ್ ಢಿಕ್ಕಿ ಹೊಡೆದು ಮುಂಭಾಗ ನಿಲ್ಲಿಸಿದ್ದ ಬೈಕ್ ಜಖಂಗೊಂಡಿದೆ.
ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಹೊಸಕೆರೆಹಳ್ಳಿಯ ಯಶ್ ಮನೆಗೆ ಕಾಂಪೌಂಡಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಘಟನಾ ಸ್ಥಳದಲ್ಲಿ ಯಾರು ಇಲ್ಲದ ಕಾರಣ ಯಾರಿಗೂ ತೊಂದರೆ ಆಗಿಲ್ಲ. ಜೆಸಿಬಿ ಮೂಲಕ ಟ್ರ್ಯಾಕ್ಟರ್ ಅನ್ನು ತೆರವುಗೊಳಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story