ಈ ರವಿವಾರ (ಮೇ 31) ಸಂಪೂರ್ಣ ಲಾಕ್ಡೌನ್ ಇಲ್ಲ: ಸಿಎಂ
ಬೆಂಗಳೂರು, ಮೇ 30: ರಾಜ್ಯದಲ್ಲಿ ಈ ರವಿವಾರ(ಮೇ 31, 2020) ಸಂಪೂರ್ಣ ಲಾಕ್ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆದ್ದರಿಂದ ರವಿವಾರ ದೈನಂದಿನ ಚಟುವಟಿಕೆಗಳು ಎಂದಿನಂತೆ ಇರುತ್ತವೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
ಕೊರೋನ ವೈರಸ್ ಸಾಂಕ್ರಾಮಿಕ ಹರಡುವಿಕೆ ತಡೆಯುವ ಉದ್ದೇಶದಿಂದ ದೇಶಾದ್ಯಂತ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದೆ. ಈ ಹಂತದಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ, ರವಿವಾರ ಮಾತ್ರ ಸಂಪೂರ್ಣ ಲಾಕ್ಡೌನ್ ಇರಬೇಕು. ಅಗತ್ಯ ಸೇವೆ ಹೊರತುಪಡಿಸಿ ಯಾವುದೇ ಚಟುವಟಿಕೆ ನಡೆಸಬಾರದು ಎಂದು ರಾಜ್ಯ ಸರಕಾರ ಈ ಹಿಂದೆ ಆದೇಶ ಹೊರಡಿಸಿತ್ತು. ಅದರಂತೆ ಕಳೆದ ರವಿವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್ಡೌನ್ ಆಗಿತ್ತು.
Next Story