'ಪಾಕಿಸ್ತಾನ ಝಿಂದಾಬಾದ್' ಘೋಷಣೆ: ಜಾಮೀನಿಗೆ ಅರ್ಜಿ ಸಲ್ಲಿಸಿದ ಅಮೂಲ್ಯ
ಬೆಂಗಳೂರು, ಜೂ.4: ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿದ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ವಿದ್ಯಾರ್ಥಿನಿ ಅಮೂಲ್ಯ ಲಿಯೋನ್ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದಾಗಿ ವರದಿಯಾಗಿದೆ.
ತನ್ನನ್ನು ಬಂಧಿಸಿರುವ ಪೊಲೀಸರು ನಿಯಮಾನುಸಾರ 90 ದಿನಗಳ ಒಳಗೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಹೀಗಾಗಿ, ಸಿಆರ್ಪಿಸಿ ಕಾಯ್ದೆ ಸೆಕ್ಷನ್ 167ರ ಅಡಿ ಲಭ್ಯವಿರುವ ಪರಿಹಾರದಂತೆ ತನಗೆ ಜಾಮೀನು ನೀಡಬೇಕೆಂದು ಕೋರಿ ನಗರದ 60ನೆ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಫೆ.20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಮೈದಾನದಲ್ಲಿ ಸಿಎಎ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿ ಅಮೂಲ್ಯ ಲಿಯೋನ್, ಪಾಕಿಸ್ತಾನ ಝಿಂದಾಬಾದ್ ಘೋಷಣೆ ಕೂಗಿದ್ದಳು. ಈ ಸಂಬಂಧ ರಾಜದ್ರೋಹ ಪ್ರಕರಣ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ.
Next Story