ಜೂ.8ಕ್ಕೆ ಶಾಲಾ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲು ಸೂಚನೆ
ಬೆಂಗಳೂರು, ಜೂ.4: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಜೂ.8ರಿಂದ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಈ ಹಿಂದಿನ ಸುತ್ತೋಲೆಯಲ್ಲಿ ಜೂ.5ರಂದೇ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚಿಲಾಗಿತ್ತು. ಆದರೆ, ಈಗಾಗಲೇ ಬೇಸಿಗೆ ರಜೆ ಹಾಗೂ ಲಾಕ್ಡೌನ್ ಹಿನ್ನೆಲೆಯಲ್ಲಿ ಅನೇಕ ಶಿಕ್ಷಕರು ದೂರದ ಊರುಗಳಿಗೆ ತೆರಳಿದ್ದಾರೆ. ಹೀಗಾಗಿ ದಿನಾಂಕವನ್ನು ಮುಂದೂಡುವಂತೆ ಶಿಕ್ಷಕರ ಸಂಘ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಜೂ.8ಕ್ಕೆ ಹಾಗೂ ಮುಖ್ಯ ಶಿಕ್ಷಕರು ಜೂ.5ಕ್ಕೆ ಶಾಲೆಗಳಿಗೆ ಕಡ್ಡಾಯವಾಗಿ ಹಾಜರಾಗುವಂತೆ ಪ್ರಕಟನೆಯಲ್ಲಿ ಸೂಚಿಸಲಾಗಿದೆ.
Next Story