ಝಮೀರ್ ಅಹ್ಮದ್ ಕೋವಿಡ್ ಪರೀಕ್ಷಾ ವರದಿ ನೆಗೆಟಿವ್
ಬೆಂಗಳೂರು, ಜು.3: ಕೆಲವು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರೊಂದಿಗೆ ಕಂದಾಯ ಸಚಿವ ಆರ್.ಅಶೋಕ್ ಜೊತೆ ನಾನು ಸೇರಿದಂತೆ ಹಲವು ಮಂದಿ ಸಭೆ ನಡೆಸಿದ್ದೆವು. ಆ ವೈದ್ಯರಿಗೆ 2 ದಿನಗಳ ಬಳಿಕ ಕೊರೋನ ಸೋಂಕು ದೃಢಪಟ್ಟಿತ್ತು. ಹಾಗಾಗಿ ನಿನ್ನೆ ನಾನು ಕೊರೋನ ಪರೀಕ್ಷೆಗೆ ಒಳಗಾಗಿದ್ದು, ಇಂದು ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದೆ ಎಂದು ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್ ಟ್ವೀಟ್ ಮಾಡಿದ್ದಾರೆ.
"ನನ್ನ ಆರೋಗ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಎಲ್ಲ ಹಿತೈಷಿಗಳಿಗೂ ನಾನು ಆರೋಗ್ಯವಾಗಿದ್ದೇನೆ ಎಂದು ತಿಳಿಸಲು ಬಯಸುತ್ತೇನೆ. ನನ್ನ ಆರೋಗ್ಯದ ಬಗ್ಗೆ ಕಾಳಜಿ ತೋರಿದ ತಮ್ಮೆಲ್ಲರಿಗೂ ನಾನು ಚಿರಋಣಿ. ಕೊರೋನ ವಿರುದ್ಧದ ನನ್ನ ಹೋರಾಟ ನಿರಂತರ. ನಿಮ್ಮ ಹಾರೈಕೆ, ಆಶೀರ್ವಾದ ಸದಾ ಹೀಗೆಯೇ ಇರಲಿ" ಎಂದು ಅವರು ಮನವಿ ಮಾಡಿದ್ದಾರೆ.
Next Story