ವೇಶ್ಯಾವಾಟಿಕೆ ದಂಧೆ: ಮೂವರ ಬಂಧನ, 27 ಯುವತಿಯರ ರಕ್ಷಣೆ
ಬೆಂಗಳೂರು, ಜು.3: ಉದ್ಯೋಗ ನೆಪದಲ್ಲಿ ಹೊರರಾಜ್ಯಗಳಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಡಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಇಲ್ಲಿನ ಪುಟ್ಟೇನಹಳ್ಳಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಪ್ರಮುಖ ಆರೋಪಿ ಯೋಗೇಶ್ ಸೇರಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ.
ದಂಧೆಯಲ್ಲಿ ಸಿಲುಕಿಕೊಂಡಿದ್ದ ನೇಪಾಳದ 9 ಸೇರಿದಂತೆ ವಿವಿದ ರಾಜ್ಯಗಳ ಒಟ್ಟು 27 ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಹೆಚ್ಚಿನ ವೇತನದ ಉದ್ಯೋಗ ಕೊಡಿಸುವುದಾಗಿ ಯುವತಿಯರನ್ನು ಕರೆತಂದು ಆರೋಪಿಗಳು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎನ್ನುವ ಮಾಹಿತಿ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
Next Story