ಬೆಂಗಳೂರು ಕೃಷಿ ವಿವಿ: ರೈತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ | Vartha Bharati- ವಾರ್ತಾ ಭಾರತಿ

ಬೆಂಗಳೂರು ಕೃಷಿ ವಿವಿ: ರೈತ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜು.4: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ (ತನ್ನ ಆಡಳಿತದ ವ್ಯಾಪ್ತಿಯಲ್ಲಿ ಬರುವ 10 ಜಿಲ್ಲೆಗಳ) ಆಸಕ್ತ ರೈತ ಹಾಗೂ ರೈತ ಮಹಿಳೆಯರಿಂದ ಈ ಕೆಳಕಂಡ ಪ್ರಶಸ್ತಿಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಅಕ್ಟೋಬರ್-2020ರಲ್ಲಿ ಆಯೋಜಿಸಲಿರುವ ಕೃಷಿಮೇಳ-2020ರ  ಸಂದರ್ಭದಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ನಿಗದಿತ ಅರ್ಜಿ ನಮೂನೆಯು ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರವರ ಕಚೇರಿ, ವಿಸ್ತರಣಾ ನಿರ್ದೇಶಕರ ಕಛೇರಿ, ಜಿಕೆವಿಕೆ, ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರಗಳು (ಹಾಡೋನಹಳ್ಳಿ-ದೊಡ್ಡಬಳ್ಳಾಪುರ, ಚಂದುರಾಯನಹಳ್ಳಿ-ಮಾಗಡಿ, ಕಂದಲಿ-ಹಾಸನ, ಕೊನೇಹಳ್ಳಿ-ತಿಪಟೂರು, ವಿ.ಸಿ.ಫಾರಂ-ಮಂಡ್ಯ, ಕುರುಬೂರು ಫಾರಂ-ಚಿಂತಾಮಣಿ ಮತ್ತು ಹರದನಹಳ್ಳಿ-ಚಾಮರಾಜನಗರ) ವಿಸ್ತರಣಾ ಶಿಕ್ಷಣ ಘಟಕ (ನಾಗನಹಳ್ಳಿ-ಮೈಸೂರು)ದಲ್ಲಿ ದೊರೆಯುತ್ತದೆ. ಅರ್ಜಿ ನಮೂನೆಯು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲೂ www.uasbangalore.edu.in ಲಭ್ಯವಿರುತ್ತದೆ.

ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ:20-07-2020. ಹೆಚ್ಚಿನ ವಿವರಗಳಿಗೆ ವಿಸ್ತರಣಾ ನಿರ್ದೇಶಕರ ಕಚೇರಿ, ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು-560 065 ಇವರನ್ನು  ದೂರವಾಣಿ ಸಂಖ್ಯೆ. 080-23330153, ವಿಸ್ತರಣೆ: 401 ಸಂಪರ್ಕಿಸಬಹುದು.

ಪ್ರಶಸ್ತಿಗಳ ವಿವರ:

ಅ)  ರಾಜ್ಯ ಮಟ್ಟದ ಪ್ರಶಸ್ತಿಗಳು

1.      ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ

2.     ಸಿ. ಭೈರೇಗೌಡ ರಾಜ್ಯ ಮಟ್ಟದ ರೈತ/ರೈತಮಹಿಳೆ ಪ್ರಶಸ್ತಿ

3.     ಡಾ.ಎಂ.ಎಚ್.ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ

4.     ಡಾ. ಆರ್.ದ್ವಾರಕೀನಾಥ್ ಅತ್ಯುತ್ತಮ ರೈತ/ರೈತಮಹಿಳೆ ಪ್ರಶಸ್ತಿ

5.     ಡಾ. ಆರ್.ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ

6.     ಕೆನರಾ ಬ್ಯಾಂಕ್ ಪ್ರಾಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಹಾಗೂ ರೈತಮಹಿಳೆ ಪ್ರಶಸ್ತಿ

ಆ)  ಜಿಲ್ಲಾ ಮಟ್ಟದ ಪ್ರಶಸ್ತಿಗಳು

1.  ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ

2.  ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ

ಇ) ತಾಲೂಕು ಮಟ್ಟದ ಪ್ರಶಸ್ತಿಗಳು

1.  ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ ಪ್ರಶಸ್ತಿ

2.  ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top