ಬೆಂಗಳೂರು: ಒಂದೇ ಠಾಣೆಯ 12 ಪೊಲೀಸರಿಗೆ ಕೊರೋನ ಸೋಂಕು ದೃಢ
ಸಾಂದರ್ಭಿಕ ಚಿತ್ರ
ಬೆಂಗಳೂರು, ಜು.7: ಒಂದೇ ಪೊಲೀಸ್ ಠಾಣೆಯ 12 ಪೊಲೀಸ್ ಸಿಬ್ಬಂದಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.
ಇಲ್ಲಿನ ಎಚ್ಎಎಲ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಸೇರಿ 12 ಸಿಬ್ಬಂದಿಗೆ ಸೋಂಕು ತಗುಲಿದೆ. ಹಾಗಾಗಿ, ಠಾಣೆಯನ್ನು ಸೀಲ್ಡೌನ್ ಮಾಡಿ, ಪ್ರಾಥಮಿಕ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಕ್ವಾರಂಟೈನ್ ಪ್ರಕ್ರಿಯೆಗೆ ಒಳಪಡಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story