ಜುಲೈ 9ರಿಂದ ಬಿಬಿಎಂಪಿ ಕೇಂದ್ರ ಕಚೇರಿಗೆ ಸಾರ್ವಜನಿಕರ ಪ್ರವೇಶ ನಿಷೇಧ
ಬೆಂಗಳೂರು, ಜು.7: ಬಿಬಿಎಂಪಿಯ ಸಿಬ್ಬಂದಿ ಹಾಗೂ ಅಧಿಕಾರಿಗಳಲ್ಲಿ ಕೊರೋನ ಸೋಂಕು ದೃಢಪಡುತ್ತಿರುವ ಹಿನ್ನೆಲೆಯಲ್ಲಿ ಜುಲೈ 9ರಿಂದ ಜುಲೈ 24ರ ವರೆಗೆ ಪಾಲಿಕೆಯ ಕೇಂದ್ರ ಕಚೇರಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಿ ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಆದೇಶ ಮಾಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಬಿಬಿಎಂಪಿಯ ಕೇಂದ್ರ ಕಚೇರಿಯ ಸಿಬ್ಬಂದಿಗೆ ಕೊರೋನ ಸೋಂಕು ದೃಢಪಡುವುದು ಹೆಚ್ಚಾಗುತ್ತಿದ್ದು, ಕೇಂದ್ರ ಕಚೇರಿಗೆ ಬರುವ ಸಾರ್ವಜನಿಕರ ಸಂಖ್ಯೆಯೂ ಹೆಚ್ಚಾಗಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಸಾರ್ವಜನಿಕರ ಅನುಕೂಲಕ್ಕಾಗಿ ಈಗಾಗಲೇ ಸಕಾಲ ಯೋಜನೆ ಹಾಗೂ ಆನ್ಲೈನ್ ಸೇವೆಗಳನ್ನು ಪರಿಚಯಿಸಲಾಗಿದ್ದು, ಸಾರ್ವಜನಿಕರು ಈ ಸೇವೆಯನ್ನು ಬಳಸಲು ಮನವಿ ಮಾಡಲಾಗಿದೆ.
ಬಿಬಿಎಂಪಿ ಆನ್ಲೈನ್ ಸೇವೆಗಳು 1. www.bbmp.sahaya.in 2. Facebook: https://www.facebook.com/bbmp.comm1/
3. Twitter: @bbmpcamm 4. Email: contactusblump@gmail.com 5. what's app: 9480685700