ಸಿಎಂ ಬಿಎಸ್ವೈ ಮನೆ ಸಮೀಪವೇ ಮಾರಕಾಸ್ತ್ರಗಳಿಂದ ಬಡಿದಾಡಿದ ಯುವಕರ ತಂಡ
ಬೆಂಗಳೂರು, ಜು.8: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸ್ವಗೃಹ ಸಮೀಪದಲ್ಲಿಯೇ ಯುವಕರ ತಂಡ ಮಾರಕಾಸ್ತ್ರಗಳಿಂದ ಬಡಿದಾಡಿದ ಘಟನೆಯ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇಲ್ಲಿನ ಡಾಲರ್ಸ್ ಕಾಲನಿಯಲ್ಲಿರುವ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದ 500 ಮೀಟರ್ ದೂರದಲ್ಲಿಯೇ ಈ ಘಟನೆ ನಡೆದಿದ್ದು, ಈ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
ಕಾರಿನಿಂದ ಬಂದ ಎರಡು ತಂಡಗಳು ಹಾಡಹಗಲೇ ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡಿದ್ದು, ಆತಂಕ ಮೂಡಿಸಿದೆ. ಈ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೊತೆಗೆ ಸಿಎಂ ಮನೆಯ ಬಳಿಯೇ ಈ ರೀತಿ ನಡೆದರೆ ಸಾಮಾನ್ಯ ಜನರ ಪಾಡೇನು ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.
ಘಟನೆ ಸಂಬಂಧ ಸಂಜಯನಗರ ಠಾಣಾ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story