ಜುಲೈ 20ರ ಸುಮಾರಿಗೆ ದ್ವಿತೀಯ ಪಿಯು ಫಲಿತಾಂಶ: ಸಚಿವ ಸುರೇಶ್ ಕುಮಾರ್
ಬೆಂಗಳೂರು, ಜು.9: ಇತ್ತೀಚೆಗೆ ಪೂರ್ಣಗೊಂಡ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಜುಲೈ 20ರ ಸುಮಾರಿಗೆ ಪ್ರಕಟಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ‘‘ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ 2ನೇ ಪಿಯು ಫಲಿತಾಂಶ ಇಂದು ಬರುತ್ತದೆಯೇ ಎಂದು ಕೇಳುತ್ತಿದ್ದಾರೆ. ಈಗಾಗಲೇ ತಿಳಿಸಿರುವಂತೆ ಎರಡನೇ ಪಿಯುಸಿ ಫಲಿತಾಂಶ ಜುಲೈ 20ರ ಸುಮಾರಿಗೆ ಬರಲಿದೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ’’ ಎಂದವರು ತಿಳಿಸಿದ್ದಾರೆ.
ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ 2 ನೇ PUC ಫಲಿತಾಂಶ ಇಂದು ಬರುತ್ತದೆಯೇ ಎಂದು ಕೇಳುತ್ತಿದ್ದಾರೆ.
— S.Suresh Kumar, Minister - Govt of Karnataka (@nimmasuresh) July 9, 2020
ಈಗಾಗಲೇ ತಿಳಿಸಿರುವಂತೆ ಎರಡನೇ ಪಿಯುಸಿ ಫಲಿತಾಂಶ ಜುಲೈ 20 ರ ಸುಮಾರಿಗೆ ಬರಲಿದೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ.
Next Story