ಬೆಂಗಳೂರಿನಲ್ಲಿ 'ಲಾಕ್ಡೌನ್ ವಿಸ್ತರಣೆ' ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ
ಬೆಂಗಳೂರು, ಜು. 13: `ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೋನ ಸೋಂಕಿನ ಪ್ರಕರಣಗಳನ್ನು ನಿಯಂತ್ರಿಸುವ ದೃಷ್ಟಿಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಿಲಾಗಿರುವ ಒಂದು ವಾರದ ಲಾಕ್ಡೌನ್ ಅನ್ನು ವಿಸ್ತರಿಸುವ ಪ್ರಸ್ತಾಪ ಸರಕಾರದ ಮುಂದಿಲ್ಲ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ಕೋವಿಡ್-19 ಟಾಸ್ಕ್ ಫೋರ್ಸ್ ಸಭೆ ನಡೆಸಿದ್ದು ಜನರು ಯಾವುದೇ ಕಾರಣಕ್ಕೂ ಆತಂಕಪಡದೆ, ವಂದತಿಗಳಿಗೆ ಕಿವಿಗೊಡದೆ, ಸರಕಾರದೊಂದಿಗೆ ಸಹಕರಿಸಬೇಕು. ಈ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ನಿಯಂತ್ರಣಕ್ಕಾಗಿ ಲಾಕ್ಡೌನ್ ವಿಧಿಸಲಾಗಿದ್ದು, ಒಂದು ವಾರದೊಳಗೆ ವ್ಯವಸ್ಥೆಗಳನ್ನು ಸರಿಪಡಿಸಿಕೊಂಡು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
Next Story