ಬಕೆಟ್ ಹಿಡಿದು ಸಿ.ಪಿ.ಯೋಗೇಶ್ವರ್ ವಿರುದ್ಧ ಪ್ರತಿಭಟನೆ!
ಬೆಂಗಳೂರು, ಜು.31: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ್ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆಂದು ಆಕ್ಷೇಪಿಸಿ ಕಾಂಗ್ರೆಸ್ ಕಾರ್ಯಕರ್ತರು ಬಕೆಟ್ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಶುಕ್ರವಾರ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನ ಮುಂಭಾಗ ಜಮಾಯಿಸಿದ ಕಾರ್ಯಕರ್ತರು, ಬಿಜೆಪಿ ನಾಯಕರ ಒಲೈಕೆಗಾಗಿ ಯೋಗೇಶ್ವರ್ ಆರೋಪಗಳ ಸುರಿಮಳೆಗೆ ಮುಂದಾಗಿದ್ದಾರೆ ಎಂದು ದೂರಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಮನೋಹರ್, ಮೆಗಾಸಿಟಿಯಲ್ಲಿ ಅವ್ಯವಹಾರ ಮಾಡಿದ ಯೋಗೇಶ್ವರ್, ಮೈತ್ರಿ ಸರ್ಕಾರವನ್ನು ಕೆಳಗಿಳಿಸಿದವರು. ಈಗ ಬಿಜೆಪಿ ಸರ್ಕಾರ ಅತಂತ್ರಕ್ಕೆ ಪ್ರಯತ್ನ ಮಾಡಿದ್ದಾರೆ ಎಂದು ದೂರಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ಜನಾರ್ದನ, ಸಲೀಂ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
Next Story