ಬೆಂಗಳೂರು: ಡಿ.ರೂಪಾ ಅಧಿಕಾರ ಸ್ವೀಕಾರ
ಬೆಂಗಳೂರು, ಆ.5: ರೈಲ್ವೆ ಐಜಿಪಿಯಾಗಿದ್ದ ಡಿ.ರೂಪಾ ಅವರನ್ನು ರಾಜ್ಯ ಸರಕಾರ ಗೃಹ ಇಲಾಖೆ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದು, ಈ ಹುದ್ದೆಗೆ ಆಯ್ಕೆಯಾದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಬುಧವಾರ ರಾಜ್ಯದ ಗೃಹ ಇಲಾಖೆ ಕಾರ್ಯದರ್ಶಿಯಾಗಿ ಡಿ.ರೂಪಾ ಅವರು ಅಧಿಕಾರ ಸ್ವೀಕಾರ ಮಾಡಿರುವ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕೊರೋನ ಸೋಂಕು ಸಂಬಂಧ ಖಾಸಗಿ ಆಸ್ಪತ್ರೆಗಳು ಹೆಚ್ಚುವರಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದ ಬೆನ್ನಲ್ಲೇ ಡಿ.ರೂಪಾ ಅವರ ನೇತೃತ್ವದ ತಂಡ, ಕಾರ್ಯಾಚರಣೆ ನಡೆಸಿ ಬಡ ರೋಗಿಗಳ ಹಣ ವಾಪಸ್ಸು ಕೊಡಿಸುವುದರಲ್ಲಿ ಯಶಸ್ವಿಯಾಗಿದ್ದರು.
Next Story