ಕೋವಿಡ್19 ಕರ್ತವ್ಯ ನಿರತ ಅಧಿಕಾರಿ ಸಾವು: ಮುಖ್ಯಮಂತ್ರಿ ಸಂತಾಪ
ಬೆಂಗಳೂರು, ಆ.8: ಬೆಂಗಳೂರು ಅಂತರ್ರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನೋಡೆಲ್ ಅಧಿಕಾರಿಯಾಗಿ (ಕೆಎಎಸ್) ಕೋವಿಡ್-19 ಕರ್ತವ್ಯದಲ್ಲಿದ್ದ ಎಚ್.ಗಂಗಾಧರಯ್ಯ ಹೃದಯಾಘಾತದಿಂದ ಮರಣ ಹೊಂದಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ 25 ಲಕ್ಷ ರೂ.ಗಳ ಪರಿಹಾರ, ಕುಟುಂಬದ ಒಬ್ಬರಿಗೆ ಸರಕಾರಿ ಕೆಲಸ ಸೇರಿದಂತೆ ಪೊಲೀಸ್ ಗೌರವದೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ದಕ್ಷ ಅಧಿಕಾರಿಯಾಗಿದ್ದ ಗಂಗಾಧರಯ್ಯ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.
Next Story