ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ದಂಧೆ ಆರೋಪ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ- ಡಿಜಿಪಿ ಪ್ರವೀಣ್ ಸೂದ್
ಬೆಂಗಳೂರು, ಆ. 30: ಸ್ಯಾಂಡಲ್ವುಡ್ನಲ್ಲಿ ಮಾದಕ ವಸ್ತು(ಡ್ರಗ್ಸ್) ದಂಧೆ ನಡೆಯುತ್ತಿದೆ ಎನ್ನಲಾದ ಆರೋಪ ಸಂಬಂಧ ಪೊಲೀಸರು ಅಧಿಕಾರಿಗಳು ನಿಗಾ ಇಟ್ಟಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಡ್ರಗ್ಸ್ ಮಾಫಿಯಾದಲ್ಲಿ ಹೆಚ್ಚು ವಿದೇಶಿಗರು ಇಲ್ಲಿಗೆ ಬಂದು ಬಳಿಕ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ. ಇದು ಮೊದಲಿನಿಂದಲೂ ಸಹ ನಡೆದುಕೊಂಡು ಬಂದಿದೆ. ನಾವು ಈ ಬಗ್ಗೆ ಕಠಿಣ ಕ್ರಮ ಕೈಗೊಂಡು ವೀಸಾ ಅವಧಿ ಮುಗಿದ ವಿದೇಶಿಗರ ವಿರುದ್ಧ ಕಾರ್ಯಾಚರಣೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
ಅಕ್ರಮ ಮಾದಕ ವಸ್ತು ಮಾರಾಟದ ಬಗ್ಗೆಯೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಇನ್ನು, ಡ್ರಗ್ಸ್ ಮಾಫಿಯಾ ಬಗ್ಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.
Next Story