ಬೆಂಗಳೂರಿನಲ್ಲಿ 2 ಲಕ್ಷ ದಾಟಿದ ಕೊರೋನ ಸೋಂಕಿತರ ಸಂಖ್ಯೆ: ಒಟ್ಟು 2,715 ಮಂದಿ ಮೃತ್ಯು
ಬೆಂಗಳೂರು, ಸೆ.22: ನಗರದಲ್ಲಿ ಮಂಗಳವಾರ ಒಂದೆ ದಿನ 3,082 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 4,145 ಸೋಂಕಿತರು ಆಸ್ಪತ್ರೆಯಿಂದ ಮನೆಗೆ ತೆರೆಳಿದ್ದು, 26 ಜನರು ಮೃತರಾಗಿದ್ದಾರೆ.
ನಗರದಲ್ಲಿ ಒಟ್ಟು 2,00,728 ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 2,715 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,58,029 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 39,983 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 2,50,260 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.
ಸೋಮವಾರದ ಬಿಬಿಎಂಪಿ ಕೋವಿಡ್ ವರದಿ ಪ್ರಕಾರ ಸಿಟಿಯಲ್ಲಿ ಒಟ್ಟು ಸಕ್ರಿಯ 21,558 ಕಂಟೈನ್ಮೆಂಟ್ ಝೋನ್ಗಳಿವೆ. ಇದುವರೆಗೂ 33,140 ಕಂಟೈನ್ಮೆಂಟ್ ಝೋನ್ಗಳನ್ನು ಗುರುತಿಸಲಾಗಿದೆ. ನಗರದ 5,46,935 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 6,71,245 ಜನರನ್ನು ಗುರುತಿಸಲಾಗಿದೆ.
ನಗರದಲ್ಲಿ 14,16,331 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.13.95ರಷ್ಟಿದೆ. ಕೊರೋನಕ್ಕೆ ಮೃತರಾಗುತ್ತಿರುವ ಪ್ರಮಾಣ ಶೇ.1.36ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.77.86ರಷ್ಟಿದೆ.