ರೈತರ ಹೋರಾಟಕ್ಕೆ ನಮ್ಮ ಬೆಂಬಲ: ಡಿ.ಕೆ ಶಿವಕುಮಾರ್
ಬೆಂಗಳೂರು, ಸೆ.27: ಕಾಂಗ್ರೆಸ್ ಪಕ್ಷ ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಹೊತ್ತಿರುವ ರಣದೀಪ್ ಸುರ್ಜೆವಾಲ ಅವರನ್ನು ಸ್ವಾಗತಿಸುವ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ರೈತರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಹೋರಾಟಕ್ಕೆ ಬೆಂಬಲ ನೀಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷವಾದ್ದರಿಂದ ರೈತರ ಹೋರಾಟಕ್ಕೆ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರ ಬೆಂಬಲ ಸೂಚಿಸಲು ಸಾಧ್ಯವಿಲ್ಲ. ಇಡೀ ರಾಷ್ಟ್ರದಲ್ಲೇ ಬೆಂಬಲ ನೀಡಬೇಕು. ಹೀಗಾಗಿ ನಮ್ಮ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಈ ಬಗ್ಗೆ ಮಾತನಾಡಲಿದ್ದಾರೆ ಎಂದರು.
ನಿನ್ನೆ ಸದನದಲ್ಲಿ ಸವಾಲು ಪ್ರತಿ ಸವಾಲುಗಳು ನೋಡಿದ್ದೇವೆ. ಮುಂದಿನ ನಡೆ ಬಗ್ಗೆ ಎಲ್ಲರೂ ಕೂತು ಚರ್ಚೆ ಮಾಡುತ್ತೇವೆ' ಎಂದರು.
Next Story