ಸುಪ್ರೀಂ ಆದೇಶ ಪಾಲನೆ ಕುರಿತು ಸರ್ವಪಕ್ಷ ಸಭೆಯಲ್ಲಿ ನಿರ್ಧಾರ: ದಿನೇಶ್ ಗುಂಡೂರಾವ್
ಬೆಂಗಳೂರು, ಸೆ.27: ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶ ಪಾಲನೆ ಕುರಿತು ಸರ್ವಪಕ್ಷ ಸಭೆ ಕರೆದು ಸಿಎಂ ಸಿದ್ದರಾಮಯ್ಯ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ರಾಜ್ಯ ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಬಿಡದಿರುವ ಬಗ್ಗೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ನಿರ್ಣಯ ತೆಗೆದುಕೊಂಡಿರುವ ಕಾರಣ, ಸಿಎಂ ಸಿದ್ದರಾಮಯ್ಯ ಎಲ್ಲಾ ಪಕ್ಷಗಳ ಮುಖಂಡರ ಜೊತೆ ಮಾತನಾಡಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಸುಪ್ರೀಂ ಕೋರ್ಟ್ ಎರಡು ರಾಜ್ಯಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ನಮ್ಮ ಬೇಡಿಕೆಯು ಪ್ರಧಾನಿ ಮಧ್ಯ ಪ್ರವೇಶಿಸಬೇಕೆಂದಿದೆ. ಹೀಗಾಗಿ ಪ್ರಧಾನಿ ಅವರು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.
Next Story