ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಬೆಂಗಳೂರು, ಅ.17: ನಗರದ ಕಮರ್ಶಿಯಲ್ ಸ್ಟ್ರೀಟ್ನಲ್ಲಿ ನಿನ್ನೆ ನಡೆದ ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆಯನ್ನು ಖಂಡಿಸಿ ಬಿಜೆಪಿಯು ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಶಿವಾಜಿ ನಗರದಿಂದ ಮೆರವಣಿಗೆಯ ಮೂಲಕ ಸಾಗಿ ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೊಲೆ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದರು.
Next Story